
ಮುಂಬೈನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಮಾಜದಲ್ಲಿ ತಾರತಮ್ಯ ಇರುವವರೆಗೆ ಮೀಸಲಾತಿ ವ್ಯವಸ್ಥೆ ಮುಂದುವರಿಯಲಿದೆ ಎಂದು ಆಗಸ್ಟ್ 6ರಂದು ಸ್ಪಷ್ಟಪಡಿಸಿದ್ದಾರೆ.
ಮೀಸಲಾತಿಯ ಸೌಲಭ್ಯ ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ಕುಟುಂಬಗಳು, ಇತರ ಹಿಂದುಳಿದ ಹಾಗೂ ವಂಚಿತರಿಗೆ ಅವಕಾಶ ಕಲ್ಪಿಸಲು ಸ್ವಯಂಪ್ರೇರಿತರಾಗಿ ಮೀಸಲಾತಿಯನ್ನು ಬಿಟ್ಟುಕೊಡಬೇಕು ಎಂದು ಅವರು ಕರೆ ನೀಡಿದ್ದಾರೆ.
ಮೀಸಲಾತಿಯನ್ನು ರಾಜಕೀಯಗೊಳಿಸಬಾರದು ಎಂದು ಪ್ರತಿಪಾದಿಸಿದ ಭಾಗವತ್, ಸೌಲಭ್ಯ ಪಡೆದವರೇ ಅದನ್ನು ತ್ಯಾಗ ಮಾಡುವ ಸದ್ಭಾವನೆ ಈಗ ಮೀಸಲಾತಿ ಪಡೆಯುತ್ತಿರುವ ಸಮುದಾಯಗಳ ಒಳಗಿನಿಂದಲೇ ಹೊರಹೊಮ್ಮುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದ್ದಾರೆ.