
ಕೇವಲ 2 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಿ ಬಾಕ್ಸ್ ಆಫೀಸ್‌ನಲ್ಲಿ ಅಂದಾಜು 500 ಕೋಟಿ ರೂ. ಗಳಿಕೆ ಮಾಡಿದ ‘ಹನುಮಾನ್ ಅಂಶ್’ ಸಿನಿಮಾ ಒಟಿಟಿಗೆ ಬರಲು ಸಜ್ಜಾಗಿದೆ.
ನವೆಂಬರ್ 27ರಿಂದ ಈ ಭಕ್ತಿಪ್ರಧಾನ ಚಲನಚಿತ್ರವು ಸೋನಿ ಲೈವ್ ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದ್ದು, ನಿರ್ದೇಶಕ ವಿಶಾಲ್ ಚತುರ್ವೇದಿ ಮತ್ತು ಸೋನಿ ಲೈವ್ ಜಂಟಿಯಾಗಿ ಘೋಷಿಸಿದ್ದಾರೆ.
ಈ ಚಿತ್ರವು ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಸ್ಟ್ರೀಮ್ ಆಗಲಿದೆ ಎಂದು ವರದಿಯಾಗಿದೆ.