
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೂಪಿಸಿದ್ದ 15 ಅಂಶಗಳ ಗಾಜಾ ಶಾಂತಿ ಯೋಜನೆಯನ್ನು ಇಸ್ರೇಲ್ ತಿರಸ್ಕರಿಸಿದ್ದು, ಹಮಾಸ್ ಶಸ್ತ್ರ ತ್ಯಜಿಸುವವರೆಗೆ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಇಸ್ರೇಲ್ ರಕ್ಷಣಾ ಪಡೆಗಳು (IDF) ತಮ್ಮ ಸೈನಿಕರು ಮತ್ತು ಅಧಿಕಾರಿಗಳ ಎಲ್ಲಾ ರಜೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ, ತುರ್ತು ಪರಿಸ್ಥಿತಿಗೆ ಸಿದ್ಧವಾಗಿರಲು ಸೂಚನೆ ನೀಡಿವೆ.
ಇರಾನ್ನ ಪರಮಾಣು ಯೋಜನೆಗಳು ಭದ್ರತೆಗೆ ಬೆದರಿಕೆಯಾಗಿವೆ ಎಂದು ಭಾವಿಸಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇರಾನ್ ಮೇಲಿನ ದಾಳಿಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.