
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯಾಗಿ ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಕರಡು ಅಧಿಸೂಚನೆಯನ್ನು ಮಂಗಳವಾರ ಪ್ರಕಟಿಸಿದೆ.
ಈ ಬದಲಾವಣೆಗೆ ಸಾರ್ವಜನಿಕರು ಮತ್ತು ವಿವಿಧ ಸಂಘಟನೆಗಳಿಂದ ಬಂದ ಮನವಿಯನ್ನು ಗಣನೆಗೆ ತೆಗೆದುಕೊಂಡು ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಾರ್ವಜನಿಕರು ಈ ಅಧಿಸೂಚನೆಗೆ ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು 30 ದಿನಗಳ ಒಳಗಾಗಿ ಸಂಬಂಧಪಟ್ಟ ಇಮೇಲ್ ವಿಳಾಸಗಳಿಗೆ ಕಳುಹಿಸಬಹುದಾಗಿದೆ.