
ಹುಬ್ಬಳ್ಳಿಯ ಆಸರ ಓಣಿಯಲ್ಲಿ ಭವಾನಿ ಶಂಕರ ದೇವಾಲಯದ ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಕರೆ ನೀಡಿವೆ.
ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಭದ್ರತೆಗಾಗಿ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಅನಧಿಕೃತ ರಸ್ತೆ ನಿರ್ಮಾಣವನ್ನು ಕಿತ್ತು ಹಾಕುವುದಾಗಿ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದರೆ, ದಲಿತ ಮತ್ತು ಮುಸ್ಲಿಂ ಸಂಘಟನೆಗಳು ರಸ್ತೆ ಕಿತ್ತು ಹಾಕಲು ಬಿಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿವೆ.