Indian Politics
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ

ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ

oneindia1h
THE BRIEF
1

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ತಮ್ಮ ಹೆಸರನ್ನು ಜೋಡಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, ವಿಡಿಯೋ ಪ್ರಕಟಣೆ ಹಾಗೂ ಪ್ರಸಾರಕ್ಕೆ ತಡೆ ನೀಡುವಂತೆ ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

2

ಈ ವಿಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ. ಇದು ರಾಜಕೀಯ ದುರುದ್ದೇಶದಿಂದ ತಮ್ಮ ಚಾರಿತ್ರ್ಯಹನನ ಮಾಡುವ ಪ್ರಯತ್ನ ಎಂದು ಅವರು ಹೇಳಿದ್ದಾರೆ. ಐದು ದಶಕಗಳ ತಮ್ಮ ರಾಜಕೀಯ ಜೀವನದ ಬಗ್ಗೆ ತಮಗೆ ವಿಶ್ವಾಸವಿದೆ ಎಂದಿದ್ದಾರೆ.

3

ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಾವು ಎಂದೂ ಅಡ್ಡಿಪಡಿಸಿಲ್ಲ. ಆದರೆ, ಕೆಲವು ಮಾಧ್ಯಮಗಳು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದರಿಂದ ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋಗಬೇಕಾಯಿತು ಎಂದು ವಿಷಾದಿಸಿದ್ದಾರೆ. ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದಾರೆ.