
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಮಂಗಳವಾರ 1,003ಕ್ಕೆ ಏರಿಕೆಯಾಗಿದ್ದು, 12 ಸಾವಿರ ಮಂದಿಯನ್ನು ರಕ್ಷಿಸಲಾಗಿದೆ.
ದುರಂತದಲ್ಲಿ 583 ವಿದೇಶಿಯರು ಸೇರಿದಂತೆ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, 21 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿದ್ದಾರೆ.
ಪ್ರವಾಹದಿಂದಾಗಿ 19 ಸೇತುವೆಗಳು ಕೊಚ್ಚಿಹೋಗಿದ್ದು, ಭಾರತದ ಉತ್ತರ ಪ್ರದೇಶದ ಕುಶಿನಗರ ಮತ್ತು ಗೋರಖ್ಪುರಕ್ಕೆ 13 ಮೃತದೇಹಗಳು ತೇಲಿಬಂದಿವೆ.