
ಆಗಸ್ಟ್ 8 ಮತ್ತು 9ರಂದು ನಡೆಯಬೇಕಿದ್ದ 945 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕೆಇಎ ಅಧಿಕೃತವಾಗಿ ರದ್ದುಗೊಳಿಸಿದೆ.
ಸರ್ಕಾರದ ನಿರ್ದೇಶನದ ಮೇರೆಗೆ ಈ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆಯಲಾಗಿದ್ದು, ತಜ್ಞರ ಸಮಿತಿಯ ವರದಿ ಬಂದ ನಂತರ ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು.
ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಆಗಸ್ಟ್ 20ರವರೆಗೆ ವಿಸ್ತರಿಸಲಾಗಿದ್ದು, ಶುಲ್ಕ ಪಾವತಿಗೆ ಆಗಸ್ಟ್ 21 ಕೊನೆಯ ದಿನವಾಗಿದೆ.