
ಉತ್ತರ ಪ್ರದೇಶದ ಲಕ್ನೋದಲ್ಲಿರುವ ಕಾಂಗ್ರೆಸ್ ರಾಜ್ಯ ಸಮಿತಿಯ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಜಯ್ ರೈ ಮತ್ತು ನಾಯಕಿ ಮಮತಾ ಚೌಧರಿ ಬೆಂಬಲಿಗರ ನಡುವೆ ತೀವ್ರ ಘರ್ಷಣೆ ಸಂಭವಿಸಿದೆ.
ಕಚೇರಿಯಲ್ಲಿ ಪ್ರಮುಖ ಸಭೆ ನಡೆಯುತ್ತಿದ್ದ ವೇಳೆ ನಾಯಕರ ಪರ-ವಿರೋಧ ಘೋಷಣೆಗಳೊಂದಿಗೆ ಮಾತಿನ ಚಕಮಕಿ ಆರಂಭವಾಗಿ, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪರಸ್ಪರ ಕುರ್ಚಿ ಹಾಗೂ ಶೂಗಳನ್ನು ಎಸೆದಾಡಿಕೊಂಡಿದ್ದಾರೆ.
ಈ ಗಲಾಟೆಯಲ್ಲಿ ಕಚೇರಿಯ ಪೀಠೋಪಕರಣಗಳಿಗೆ ಹಾನಿಯಾಗಿದ್ದು, ಹಲವು ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.