
1937ರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ, ಇನ್ನು ಮುಂದೆ ಪಕ್ಷದ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ಗೀತೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪದ ಮೇಲೆ ಸೋನಿಯಾ ಗಾಂಧಿ ವಿರುದ್ಧ ದೂರುಗಳು ದಾಖಲಾಗಿರುವ ಬೆನ್ನಲ್ಲೇ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ರವೀಂದ್ರನಾಥ ಟ್ಯಾಗೋರ್ ಅವರ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮೊದಲ ಎರಡು ಚರಣಗಳು ರಾಷ್ಟ್ರೀಯ ಸ್ವರೂಪವನ್ನು ಹೊಂದಿವೆ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.