
ಹುಬ್ಬಳ್ಳಿಯಲ್ಲಿ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಮೃತಪಟ್ಟ ದುರಂತದ ಬೆನ್ನಲ್ಲೇ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿದ್ದಾರೆ.
ಧಾರವಾಡ ಸಿಟಿ ಬಸ್ ನಿಲ್ದಾಣದ ವೃತ್ತದ ಬಳಿಯ ಅಂಗಡಿಗಳ ಮೇಲೆ ಗುರುವಾರ ನಡೆಸಿದ ಕಾರ್ಯಾಚರಣೆಯಲ್ಲಿ 500ಕ್ಕೂ ಹೆಚ್ಚು ನಿಷೇಧಿತ ಮಾರಕ ಮಾಂಜಾ ದಾರದ ರೋಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಜಿ. ಬೊರಸೆ ಅವರು ಅವಳಿ ನಗರದಲ್ಲಿ ಮಾಂಜಾ ದಾರದ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ.