
ದೇವಸ್ಥಾನಗಳ ಒಳಗೆ ಅರ್ಚಕರು ಅತ್ಯಾಚಾರ ಎಸಗುತ್ತಾರೆ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (AISA) ಅಧ್ಯಕ್ಷೆ ನೇಹಾ ಬೋರಾ ನೀಡಿದ ವಿವಾದಾತ್ಮಕ ಹೇಳಿಕೆಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಹಾಗೂ ಮುಖಂಡ ಗೌರವ್ ಭಾಟಿಯಾ ಅವರು ಬೋರಾ ಹೇಳಿಕೆಯನ್ನು ಹಿಂದೂ ವಿರೋಧಿ ಮನಸ್ಥಿತಿ ಎಂದು ತೀವ್ರವಾಗಿ ಖಂಡಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಸಮಾಜವಾದಿ ಪಕ್ಷದ ನಾಯಕರು ಕೂಡ ಈ ಹೇಳಿಕೆಯನ್ನು ವಿರೋಧಿಸಿದ್ದು, ದೆಹಲಿಯಲ್ಲಿ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.