
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಮುಂಬರುವ 'ಕಾಕಾ' ಸಿನಿಮಾದ ಚಿತ್ರೀಕರಣ ಸ್ಥಗಿತಗೊಂಡಿದೆ ಎಂಬ ವದಂತಿಗಳನ್ನು ಚಿತ್ರತಂಡ ಸಂಪೂರ್ಣವಾಗಿ ತಳ್ಳಿಹಾಕಿದ್ದು, ಸಿನಿಮಾ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 13ರಂದು ಚಿತ್ರಮಂದಿರಗಳಿಗೆ ಬರಲಿದೆ ಎಂದು ಖಚಿತಪಡಿಸಿದೆ.
ಈ ಸಿನಿಮಾ ರಜನಿಕಾಂತ್ ಅಭಿನಯದ 'ಬಾಷಾ' ಚಿತ್ರದ ಕಥೆಗೆ ಹೋಲಿಕೆಯಾಗುತ್ತದೆ ಎಂಬ ಕಾರಣಕ್ಕೆ ಶೂಟಿಂಗ್ ನಿಲ್ಲಿಸಲಾಗಿದೆ ಎಂದು ಫಿಲ್ಮ್ ಇಂಡಸ್ಟ್ರಿಯಲ್ಲಿ ಸುದ್ದಿಯಾಗಿತ್ತು.
ಬಾಬಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಚಿರಂಜೀವಿ ಸೂಪರ್‌ವೈಸರ್ ಸತ್ಯಂ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅನಸ್ವರ ರಾಜನ್, ನಿವೇತಾ ಪೇತುರಾಜ್, ಸುನಿಲ್ ಹಾಗೂ ಅನುರಾಗ್ ಕಶ್ಯಪ್ ಪ್ರಮುಖ ಪಾತ್ರಗಳಲ್ಲಿದ್ದಾರೆ.