
ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಅವರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ವಿಚಾರಣೆ ವೇಳೆ ಐಶ್ವರ್ಯಾ ಅವರು ಮಹಿಳಾ ಪಿಎಸ್‌ಐ ಸವಿತಾ ಬಿ.ಪಾಟೀಲ್ ಅವರಿಗೆ ವಿಡಿಯೊ ಮೂಲಕ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ ಎಂದು ಅವರ ಹಿರಿಯ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.
ಶ್ರೀರಂಗಪಟ್ಟಣದ ಅಹಲ್ಯಾದೇವಿ ದೇವಸ್ಥಾನದ ಗರ್ಭಗುಡಿ ಪ್ರವೇಶಿಸುವಾಗ ನಡೆದ ಮಾತಿನ ಚಕಮಕಿಯಲ್ಲಿ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.