
ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಸಿರಿವಾರದಲ್ಲಿ 194 ಎಕರೆ ಪ್ರದೇಶದಲ್ಲಿ 9.9 ಕೋಟಿ ರೂ. ವೆಚ್ಚದ ತೋಟಗಾರಿಕಾ ಪಾರ್ಕ್ ನಿರ್ಮಾಣಕ್ಕೆ ಸಚಿವ ಶಿವರಾಜ್ ತಂಗಡಗಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಯೋಜನೆಯು ಈ ಭಾಗದ ಐದಾರು ಸಾವಿರ ಮಂದಿಗೆ ಉದ್ಯೋಗಾವಕಾಶ ಕಲ್ಪಿಸುವುದಲ್ಲದೆ, ರೈತರ ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ, ಕೋಲ್ಡ್ ಸ್ಟೋರೇಜ್ ಮತ್ತು ಸಂಶೋಧನಾ ಕೇಂದ್ರಗಳನ್ನು ಒದಗಿಸಲಿದೆ.
ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಈ ಪಾರ್ಕ್, ರೈತರ ಜಮೀನುಗಳಿಗೆ ತೊಂದರೆಯಾಗದಂತೆ ಮೂಲ ಸೌಕರ್ಯಗಳನ್ನು ಒಳಗೊಂಡಿರಲಿದೆ ಎಂದು ಸಚಿವರು ತಿಳಿಸಿದ್ದಾರೆ.