
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಮೈತ್ರಿಕೂಟ ನಡೆಸುವ ಪ್ರತಿಭಟನೆಯನ್ನು ಕಾಕ್ರೋಚ್ ಜನತಾ ಪಾರ್ಟಿ ಸ್ವಾಗತಿಸಿದೆ.
ಅಕ್ಟೋಬರ್ 10ರಂದು ನವದೆಹಲಿಯ ಜಂತರ್ ಮಂತರ್ನಲ್ಲಿ ಯುವಜನರ ಧ್ವನಿಯಾಗಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ತಿಳಿಸಿದ್ದಾರೆ.
ಸರ್ಕಾರ ಹಾಗೂ ಪೊಲೀಸರು ಬೆದರಿಕೆ ಹಾಕಿದರೂ ಯುವಜನರ ಈ ಹೋರಾಟ ನಿಲ್ಲುವುದಿಲ್ಲ ಎಂದು ಸಿಜೆಪಿ ನಾಯಕರು ಎಚ್ಚರಿಸಿದ್ದಾರೆ.