
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ವಕೀಲರೊಂದಿಗೆ ಚರ್ಚಿಸಲು ಅನುಕೂಲವಾಗುವಂತೆ, ಖುದ್ದು ಹಾಜರಿಗೆ ಅವಕಾಶ ನೀಡಬೇಕೆಂದು ನಟ ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಹಿಂದೆ 59ನೇ ಸಿ ಸಿ ಎಚ್ ನ್ಯಾಯಾಲಯವು ದರ್ಶನ್ ಖುದ್ದು ಹಾಜರಿಯ ಅಗತ್ಯವಿಲ್ಲವೆಂದು ತೀರ್ಪು ನೀಡಿ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು.
ದರ್ಶನ್ ಸಲ್ಲಿಸಿರುವ ಈ ಅರ್ಜಿಯ ವಿಚಾರಣೆಯು ಇಂದು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠದಲ್ಲಿ ನಡೆಯಲಿದೆ.