
ಮಡಿಕೇರಿಯಿಂದ ವಿರಾಜಪೇಟೆಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಅಸ್ಸಾಂ ಮೂಲದ ಸುರ್ಜಾ ಬಾನು ಎಂಬ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ರಾಜೇಶ್ ಹಾಗೂ ಕಂಡಕ್ಟರ್ ಕಿಶನ್ ಮಾರ್ಗಮಧ್ಯೆ ಎಲ್ಲೂ ನಿಲ್ಲಿಸದೆ ಬಸ್ ಅನ್ನು ನೇರವಾಗಿ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯ ಆವರಣಕ್ಕೆ ಕೊಂಡೊಯ್ದಿದ್ದಾರೆ.
ಆಸ್ಪತ್ರೆಗೆ ತಲುಪುತ್ತಿದ್ದಂತೆ ಗರ್ಭಿಣಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಸಮಯಪ್ರಜ್ಞೆ ಮೆರೆದ ಬಸ್ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ವೈದ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.