
2020-21ರಿಂದ 2024-25ರ ಅವಧಿಯಲ್ಲಿ ದೇಶದ 23 ಐಐಟಿಗಳಲ್ಲಿ 45 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತಪಟ್ಟವರಲ್ಲಿ 28 ಮಂದಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದವರಾಗಿದ್ದು, 2023-24ನೇ ಸಾಲಿನಲ್ಲಿ ಅತಿ ಹೆಚ್ಚು ಅಂದರೆ 16 ಪ್ರಕರಣಗಳು ವರದಿಯಾಗಿವೆ.
ಐಐಟಿ ಹೈದರಾಬಾದ್ನಲ್ಲಿ ಅತಿ ಹೆಚ್ಚು ಅಂದರೆ 7 ಸಾವುಗಳು ದಾಖಲಾಗಿದ್ದು, ಆತ್ಮಹತ್ಯೆಗೆ ನಿರ್ದಿಷ್ಟ ಕಾರಣಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಸರ್ಕಾರ ಬಿಡುಗಡೆ ಮಾಡಿಲ್ಲ.