
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಅಂತಿಮ ಟಿ20 ಪಂದ್ಯದ ಟಾಸ್ ರಾತ್ರಿ 9 ಗಂಟೆಗೆ ನಡೆದಿದ್ದು, ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಬೆಂಗಳೂರಿನಲ್ಲಿ 727 ದಿನಗಳ ಬಳಿಕ ಅಂತರರಾಷ್ಟ್ರೀಯ ಟಿ20 ಪಂದ್ಯ ನಡೆಯುತ್ತಿದ್ದು, ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಬರೋಬ್ಬರಿ 4 ವರ್ಷಗಳ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಪಡೆದಿದ್ದಾರೆ.
14 ವರ್ಷಗಳ ಹಿಂದೆ ಡಿಸೆಂಬರ್ 2012ರಲ್ಲಿ ಯಾವ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಭುವನೇಶ್ವರ್ ಕುಮಾರ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರೋ, ಅದೇ ಮೈದಾನದಲ್ಲಿ ಅವರ ವೃತ್ತಿಜೀವನಕ್ಕೆ ಪುನರ್ಜನ್ಮ ಸಿಕ್ಕಿದೆ.