
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಭಾಗದಲ್ಲಿ ಪಿಎಂಇಜಿಪಿ ಯೋಜನೆಯಡಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ರೈತರಿಗೆ 92 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಂಕರಪ್ಪ ಎಂಬಾತ ತಾನು ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ರೈತರಿಂದ ಲಕ್ಷಾಂತರ ರೂಪಾಯಿ ಕಮಿಷನ್ ಪಡೆದು ಪರಾರಿಯಾಗಿದ್ದನು.
ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 72 ಜನರು ಹಳೆಬೀಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.