
ನೇಪಾಳ ಮತ್ತು ಬಿಹಾರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಗಂಗಾ ಹಾಗೂ ಕೋಸಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕಟಿಹಾರ್ ಜಿಲ್ಲೆಯ ನೂರಾರು ಗ್ರಾಮಗಳು ಜಲಾವೃತಗೊಂಡಿವೆ.
ಪ್ರವಾಹದಿಂದಾಗಿ ರಸ್ತೆಗಳು 4 ರಿಂದ 5 ಅಡಿ ನೀರಿನಲ್ಲಿ ಮುಳುಗಿದ್ದು, ಪಾಟ್ನಾ ಮತ್ತು ಭಾಗಲ್ಪುರ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಂತ್ರಸ್ತರ ರಕ್ಷಣೆಗೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದ್ದು, ಜಿಲ್ಲಾಡಳಿತವು ನಿರಾಶ್ರಿತರಿಗಾಗಿ ಸಮುದಾಯ ಅಡುಗೆ ಮನೆಗಳನ್ನು ಆರಂಭಿಸಿ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿದೆ.