
ಬೆಂಗಳೂರು ನಗರ ಪೊಲೀಸರು ನಡೆಸಿದ 'ಆಪರೇಷನ್ ಮುಕ್ತ' ಕಾರ್ಯಾಚರಣೆಯಲ್ಲಿ ಒಟ್ಟು 105 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲಾಗಿದೆ.
ಎಲೆಕ್ಟ್ರಾನಿಕ್ ಸಿಟಿ ವಿಭಾಗದಲ್ಲಿ 43 ಮತ್ತು ವೈಟ್ಫೀಲ್ಡ್ ವಿಭಾಗದಲ್ಲಿ 62 ಮಂದಿ ಅಕ್ರಮ ವಲಸಿಗರು ಪರಿಶೀಲನೆ ವೇಳೆ ಪತ್ತೆಯಾಗಿದ್ದಾರೆ.
ಪತ್ತೆಯಾದ ಎಲ್ಲಾ 105 ಮಂದಿಯ ಬಗ್ಗೆ ಎಫ್ಆರ್ಆರ್ಓಗೆ ಮಾಹಿತಿ ನೀಡಲಾಗಿದ್ದು, ಅವರನ್ನು ವಲಸಿಗರ ಕೇಂದ್ರಗಳಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ.