
ಹಿಮಾಲಯದಲ್ಲಿ ಗ್ಲೇಸಿಯರ್ ಕುಸಿತದಿಂದ ಉಂಟಾದ ಭೀಕರ ಪ್ರವಾಹಕ್ಕೆ ನೇಪಾಳ ಮತ್ತು ಟಿಬೆಟ್ನಲ್ಲಿ ಒಟ್ಟು 586 ಮಂದಿ ಮೃತಪಟ್ಟಿದ್ದು, 2,400ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ.
ರಸುವಾ ಜಿಲ್ಲೆಯ ಅಪ್ಪರ್ ತ್ರಿಶೂಲಿ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ನೂರಾರು ಮಂದಿ ಸಿಲುಕಿದ್ದು, 14,829 ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದಿಂದ ಇದುವರೆಗೆ 84 ಭಾರತೀಯರನ್ನು ರಕ್ಷಿಸಲಾಗಿದ್ದು, ಇನ್ನೂ 320 ಭಾರತೀಯರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.