
ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ವೇಳೆ ಸಂಭವಿಸುವ ಅಪಘಾತಗಳನ್ನು ತಡೆಯಲು ಕಾಲೇಜು ಶಿಕ್ಷಣ ಇಲಾಖೆಯು ಪ್ರವಾಸದಲ್ಲಿ ಸೆಲ್ಫಿ ಹಾಗೂ ರೀಲ್ಸ್ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಪ್ರವಾಸ ಆರಂಭವಾಗುವ ಮುನ್ನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಬೇಕು ಮತ್ತು ಉಪನ್ಯಾಸಕರು ನಿಗಾವಹಿಸಬೇಕು ಎಂದು ತಿಳಿಸಲಾಗಿದ್ದು, ಪೂರ್ವಾನುಮತಿ ಹಾಗೂ ಪೋಷಕರ ಸಮ್ಮತಿ ಪತ್ರ ಕಡ್ಡಾಯಗೊಳಿಸಲಾಗಿದೆ.
ತಂಡದಲ್ಲಿ ಕನಿಷ್ಠ ಒಬ್ಬರು ಖಾಯಂ ಅಧ್ಯಾಪಕರು ಇರಬೇಕು ಮತ್ತು ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಇಬ್ಬರು ಮಹಿಳಾ ಅಧ್ಯಾಪಕಿಯರು ಕಡ್ಡಾಯವಾಗಿ ಇರಬೇಕೆಂದು ಇಲಾಖೆ ಸೂಚಿಸಿದೆ.