
ಕೊಡಗು ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷ ತೀವ್ರಗೊಂಡಿದ್ದು, ಕಳೆದ 8 ತಿಂಗಳ ಅವಧಿಯಲ್ಲಿ ಕಾಡಾನೆಗಳ ದಾಳಿಗೆ ಐವರು ಬಲಿಯಾಗಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜಿಲ್ಲೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಕಾಡಾನೆಗಳು ಕಾಫಿ ತೋಟಗಳನ್ನೇ ಆವಾಸಸ್ಥಾನವನ್ನಾಗಿಸಿಕೊಂಡಿದ್ದು, ಇವುಗಳನ್ನು ಸೆರೆಹಿಡಿಯಲು 7 ಸಾಕಾನೆಗಳು ಮತ್ತು 70ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸಮಸ್ಯೆ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಆಡಳಿತಕ್ಕೆ ಒಂದು ವಾರದ ಗಡುವು ನೀಡಿದ್ದು, ಆನೆಗಳಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಲು ಅರಣ್ಯ ಪ್ರದೇಶದಲ್ಲಿ ಮರಗಳನ್ನು ನೆಡುವಂತೆ ಸಾರ್ವಜನಿಕರು ಸಲಹೆ ನೀಡಿದ್ದಾರೆ.