
ಸೆಪ್ಟೆಂಬರ್ 28ರಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ಬ್ಯಾಂಕ್ ನೌಕರರ ಸುದೀರ್ಘ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ.
ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹಾಗೂ ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ಸ್ ನಡುವೆ ಭಾನುವಾರ ತಡರಾತ್ರಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಶನಿವಾರ ರಜೆ ಬೇಡಿಕೆ ಸೇರಿದಂತೆ ನೌಕರರ ಪ್ರಮುಖ ಬೇಡಿಕೆಗಳ ಕುರಿತು ಆಡಳಿತ ಮಂಡಳಿಯು ಧನಾತ್ಮಕವಾಗಿ ಸ್ಪಂದಿಸಿದೆ.