
ಬೆಂಗಳೂರಿನ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಬಳಸುತ್ತಿದ್ದ 800 ಕೆಜಿಗೂ ಹೆಚ್ಚು ಜಿಲೆಟಿನ್ ಅನ್ನು ಬೆಳ್ಳಂದೂರು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.
ಆದರ್ಶ ಕಂಪನಿಯು ಬಂಡೆಗಳನ್ನು ತೆರವುಗೊಳಿಸಲು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಅಕ್ರಮವಾಗಿ ಸ್ಫೋಟಕಗಳನ್ನು ಬಳಸುತ್ತಿತ್ತು ಎಂಬ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
ಬೆಳ್ಳಂದೂರು ಠಾಣೆ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಫೋಟಕಗಳನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.