
ನಟ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ನಿರ್ದೇಶನದ ಚೊಚ್ಚಲ ಚಿತ್ರ 'ಸಿಗ್ಮಾ' ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಸಂದೀಪ್ ಕಿಶನ್ ನಾಯಕನಾಗಿ ನಟಿಸಿರುವ ಈ ಆ್ಯಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ಎಸ್. ತಮನ್ ಸಂಗೀತ ನೀಡಿದ್ದು, ಲೈಕಾ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ.
ಈ ಹಿಂದೆ ಜುಲೈ 31ರಂದು ಬಿಡುಗಡೆಯಾಗಬೇಕಿದ್ದ ಸಿನಿಮಾ ಕಾರಣಾಂತರಗಳಿಂದ ವಿಳಂಬವಾಗಿದ್ದು, ಇದೀಗ ಹೊಸ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.