
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ನಟ ಶಿವರಾಜ್ಕುಮಾರ್ ಸೇರಿದಂತೆ ಗಣ್ಯರಿಗೆ ಅಧಿಕಾರಿಗಳು ಮನೆ ಬಾಗಿಲಿಗೆ ತೆರಳಿ ಸೇವೆ ನೀಡುತ್ತಿದ್ದರೆ, ಸಾಮಾನ್ಯರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವಂತಾಗಿದೆ.
ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಸೆಪ್ಟೆಂಬರ್ 11ರಂದು ಹೊಸ ಮಾರ್ಗಸೂಚಿ ಹೊರಡಿಸಿ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಪರವಾಗಿ ಕುಟುಂಬದ ಸದಸ್ಯರು ದಾಖಲೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ಈ ಪರಿಷ್ಕರಣೆಯು ಯಾವುದೇ ವ್ಯಕ್ತಿಯ ಪೌರತ್ವವನ್ನು ನಿರ್ಧರಿಸುವ ಪರಮಾಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.