Indian Politics
ಧಾರವಾಡದಲ್ಲಿ ₹50 ಲಕ್ಷ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಧಾರವಾಡದಲ್ಲಿ ₹50 ಲಕ್ಷ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

prajavani10h
THE BRIEF
1

ಧಾರವಾಡದಲ್ಲಿ 33 ಎಕರೆ ಜಮೀನಿನ ಪಹಣಿ ಸರಿಪಡಿಸಿಕೊಡಲು ಒಟ್ಟು ಒಂದು ಎಕರೆ ಜಮೀನು ಹಾಗೂ ₹ 50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

2

ನಗರದ ಕರ್ನಾಟಕ ಮಹಾವಿದ್ಯಾಲಯದ ಆವರಣದಲ್ಲಿ ₹ 50 ಲಕ್ಷ ನಗದು ಪಡೆಯುತ್ತಿದ್ದ ವೇಳೆ ಆರೋಪಿಯನ್ನು ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಎಸ್‌.ಟಿ ನೇತೃತ್ವದಲ್ಲಿ ವಶಕ್ಕೆ ಪಡೆಯಲಾಗಿದೆ.

3

ಬಾಗಲಕೋಟೆಯ ಮಂಜುನಾಥ ಅರಳಿಕಟ್ಟಿ ಎಂಬವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ತಹಶೀಲ್ದಾರ್ ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.