
ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಬಿಜ್ವಾರ್ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ದಿಢೀರನೆ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಜೇಬಿನಿಂದ ಫೋನ್ ಹೊರತೆಗೆಯುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ಸಮಯಪ್ರಜ್ಞೆಯಿಂದ ಅದನ್ನು ದೂರ ಎಸೆದಿದ್ದರಿಂದ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ.
ಮೊಬೈಲ್ ಅನ್ನು ರಾತ್ರಿಯಿಡೀ ಚಾರ್ಜಿಂಗ್‌ಗೆ ಇಟ್ಟು ಬಳಸಿದ್ದೇ ಈ ಬ್ಯಾಟರಿ ಸ್ಫೋಟಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.