
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಗ್ರಾಮದ ಬಳಿ ಬೆಂಗಳೂರು-ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ 'ಡ್ರೀಮ್' ಖಾಸಗಿ ಬಸ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ನಲ್ಲಿದ್ದ ಇಬ್ಬರು ಪ್ರಯಾಣಿಕರು ಕೆಳಗಿಳಿದಿದ್ದು, ಉಳಿದ ಪ್ರಯಾಣಿಕರು ಮುಂಚಿತವಾಗಿ ಇಳಿದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಸ್ನ ಶೇ 80ರಷ್ಟು ಭಾಗ ಸುಟ್ಟುಹೋಗಿದ್ದು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.