
ರಷ್ಯಾದ ಅಮುರ್ ಪ್ರಾಂತ್ಯದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ 'ಟು-95' ಬಾಂಬರ್ ಮಿಲಿಟರಿ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿದ್ದ 6 ಮಂದಿ ಸಿಬ್ಬಂದಿ ಮೃತಪಟ್ಟಿದ್ದಾರೆ.
ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಜನವಸತಿಯಿಲ್ಲದ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಷ್ಯಾ ರಕ್ಷಣಾ ಸಚಿವಾಲಯವು ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದು, ತಾಂತ್ರಿಕ ದೋಷ ಅಥವಾ ಮಾನವ ಸಹಜ ತಪ್ಪಿನ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.