
ಕರ್ನಾಟಕದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಪೂರ್ವಾನುಮತಿ ಕಡ್ಡಾಯಗೊಳಿಸುವ 'ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ-2026' ಅನ್ನು ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಆರ್ಎಸ್ಎಸ್ನ ಪಥಸಂಚಲನ, ಸಾರ್ವಜನಿಕ ಸಭೆಗಳು ಮತ್ತು ಇತರ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿರುವ ಈ ವಿಧೇಯಕಕ್ಕೆ ಬಿಜೆಪಿ ಶಾಸಕ ಅರಗ ಜ್ಞಾನೇಂದ್ರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಹಿಂದೆ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಂಘಟನೆಯು ಹೈಕೋರ್ಟ್ ಮೆಟ್ಟಿಲೇರಿದಾಗ, ನ್ಯಾಯಾಲಯವು ಕೆಲವು ಷರತ್ತುಗಳೊಂದಿಗೆ ಪಥಸಂಚಲನಕ್ಕೆ ಅವಕಾಶ ನೀಡಿತ್ತು.