
ಕನ್ನಡ ಮತ್ತು ತೆಲುಗು ಕಿರುತೆರೆ ನಟಿ ಐಶ್ವರ್ಯಾ ಪಿಸ್ಸೆ ಅವರು ತಮ್ಮ ಪತಿಯಿಂದ ಅಧಿಕೃತವಾಗಿ ವಿಚ್ಛೇದನ ಪಡೆದಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದಾರೆ.
ಮೈಸೂರು ಮೂಲದ ಹರಿ ವಿನಯ್ ಅವರೊಂದಿಗೆ 2019ರಲ್ಲಿ ಸರಳವಾಗಿ ವಿವಾಹವಾಗಿದ್ದ ಇವರು, ಕಳೆದ ಒಂದೂವರೆ ವರ್ಷದಿಂದ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.
ಪರಸ್ಪರ ಒಪ್ಪಿಗೆಯ ಮೇರೆಗೆ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿರುವುದಾಗಿ ಸ್ಪಷ್ಟಪಡಿಸಿರುವ ನಟಿ, ತಮ್ಮ ಖಾಸಗಿತನವನ್ನು ಗೌರವಿಸುವಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.