
ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್ನಲ್ಲಿ ಭಾರತ ತಂಡವು ಆಗಸ್ಟ್ 30 ರಂದು ಥೈಲ್ಯಾಂಡ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಉಭಯ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯ ಸೆಪ್ಟೆಂಬರ್ 5 ರಂದು ನಡೆಯಲಿದೆ.
ಭಾರತ ತಂಡವು ಈ ವರ್ಷ ಆಡಿದ 16 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 9 ಪಂದ್ಯಗಳನ್ನು ಸೋತಿದ್ದು, ಮುಂದಿನ ಆರು ತಿಂಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದೆ.