ವಾರದಲ್ಲಿ ಐದು ದಿನಗಳ ಕೆಲಸದ ಪದ್ಧತಿ ಸೇರಿದಂತೆ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ನೌಕರರ ಸಂಘಟನೆಗಳು ಸೋಮವಾರದಿಂದ ಬುಧವಾರದವರೆಗೆ ಮುಷ್ಕರ ನಡೆಸಲಿವೆ.
ಮುಷ್ಕರದ ಅವಧಿಯಲ್ಲಿ ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ UPI, ಮೊಬೈಲ್ ಬ್ಯಾಂಕಿಂಗ್, ATM ಗಳನ್ನು ಬಳಸಿಕೊಳ್ಳುವಂತೆ ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ ಮನವಿ ಮಾಡಿದೆ.
ಗ್ರಾಹಕರು ಬ್ಯಾಂಕ್ ಶಾಖೆಗೆ ಭೇಟಿ ನೀಡಿಯೇ ಪಡೆಯಬೇಕಾದ ಸೇವೆಗಳನ್ನು ಮುಷ್ಕರದ ಅವಧಿಗೆ ಮುನ್ನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.