
ಶ್ರೀರಂಗಪಟ್ಟಣದ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಪಿಎಸ್ಐ ಸವಿತಾ ಬಿ. ಪಾಟೀಲ್ ಅವರಿಗೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಕಪಾಳಮೋಕ್ಷ ಮಾಡಿದ ವಿಡಿಯೋ ವೈರಲ್ ಆಗಿದೆ.
ಆಗಸ್ಟ್ 12 ರಂದು ದರ್ಶನದ ಸರದಿ ವಿಚಾರವಾಗಿ ನಡೆದ ವಾಗ್ವಾದದ ವೇಳೆ ಈ ಘಟನೆ ನಡೆದಿದ್ದು, ಈ ಕುರಿತು ಮಹಿಳಾ ಪೊಲೀಸ್ ಅಧಿಕಾರಿ ಕ್ಯಾತನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಶಾಸಕ ಸುರೇಶ್ ಗೌಡ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ತಮ್ಮ ಮಗಳು ಗರ್ಭಗುಡಿಗೆ ಪ್ರವೇಶಿಸಲು ಅವಕಾಶ ನೀಡದಿದ್ದಕ್ಕೆ ವಿವಾದ ಉಂಟಾಯಿತು ಎಂದು ತಿಳಿಸಿದ್ದಾರೆ.