
ಆಂಧ್ರಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ. 34ರಷ್ಟು ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಆದೇಶದ ಬೆನ್ನಲ್ಲೇ ಸುಪ್ರೀಂ ಕೋರ್ಟ್ನಲ್ಲೂ ಹಿನ್ನಡೆಯಾಗಿದೆ.
ಗ್ರಾಮ ಪಂಚಾಯಿತಿಗಳಲ್ಲಿ ಶೇ. 34 ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ. 33.33 ಮೀಸಲಾತಿ ಕಲ್ಪಿಸಿ ಆಗಸ್ಟ್ನಲ್ಲಿ ಹೊರಡಿಸಿದ್ದ ಆದೇಶವನ್ನು ಎಸ್ಸಿ, ಎಸ್ಟಿ ಮತ್ತು ಒಟ್ಟು ಮೀಸಲಾತಿ ಶೇ. 50ರ ಮಿತಿ ಮೀರಬಾರದು ಎಂಬ ಕಾರಣಕ್ಕೆ ಹೈಕೋರ್ಟ್ ರದ್ದುಪಡಿಸಿತ್ತು.
ಮೀಸಲಾತಿ ಪ್ರಮಾಣ ಮರುನಿರ್ಧರಿಸಲು ಅಗತ್ಯ ದತ್ತಾಂಶ ಸಂಗ್ರಹಿಸುವುದು ಸರ್ಕಾರದ ಮುಂದಿರುವ ಸವಾಲಾಗಿದ್ದು, ತೀರ್ಪಿನ ದಿನದಿಂದ ಆರು ವಾರಗಳಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಿಸಲು ಹೈಕೋರ್ಟ್ ಸೂಚಿಸಿದೆ.