
ರಾಜ್ಯದ 309 ಕರ್ನಾಟಕ ಪಬ್ಲಿಕ್ ಶಾಲೆಗಳ ಸುಮಾರು 23,500 ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಸಮಗ್ರ ಶಿಕ್ಷಣ ಯೋಜನೆಯಡಿ ಉಚಿತ ಸಾರಿಗೆ ಒದಗಿಸಲು ನಿರ್ಧರಿಸಲಾಗಿದೆ.
1ನೇ ತರಗತಿಯಿಂದ 12ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವಿದ್ಯಾರ್ಥಿಗೆ ಮಾಸಿಕ 600 ರೂಪಾಯಿ ಅನುದಾನ ಮೀಸಲಿಡಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶಾಲಾ ವಾಹನದಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮತ್ತು ಅಗ್ನಿಶಮನ ಸಾಧನ ಕಡ್ಡಾಯಗೊಳಿಸಲಾಗಿದೆ.