
ಬೆಂಗಳೂರು ಉತ್ತರ ತಾಲೂಕಿನ ದಾಸರಪುರದಲ್ಲಿ ಮನೆಯ ಬೀಗ ಮುರಿದು 100 ಗ್ರಾಂ ಚಿನ್ನಾಭರಣವನ್ನು ಕಳ್ಳನೊಬ್ಬ ದೋಚಿಕೊಂಡು ಪರಾರಿಯಾಗಿದ್ದಾನೆ.
ಸುಮಾರು 8 ಲಕ್ಷ ರೂ. ಮೌಲ್ಯದ ಆಭರಣಗಳು ಕಳವಾಗಿದ್ದು, ಘಟನೆಯು ಕೇವಲ ಒಂದು ಗಂಟೆಯ ಅವಧಿಯಲ್ಲಿ ನಡೆದಿದೆ ಎಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.