
20 ನೇ ಆವೃತ್ತಿಯ ಏಷ್ಯನ್ ಕ್ರೀಡಾಕೂಟಕ್ಕೆ ನಗೋಯಾದ ಮಿಜುಹೊ ಪಾರ್ಕ್ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ವರ್ಣರಂಜಿತ ಉದ್ಘಾಟನಾ ಸಮಾರಂಭದೊಂದಿಗೆ ಚಾಲನೆ ಸಿಕ್ಕಿದೆ.
ಒಲಿಂಪಿಕ್ಸ್ ಪದಕ ವಿಜೇತ ಶೂಟರ್ ಮನು ಭಾಕರ್ ಮತ್ತು ಕಬಡ್ಡಿ ಆಟಗಾರ ಪವನ್ ಸೆಹ್ರಾವತ್ ಭಾರತೀಯ ತಂಡವನ್ನು ಮುನ್ನಡೆಸಿದರು.
45 ದೇಶಗಳಿಂದ ಸುಮಾರು 11,000 ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, 43 ಸ್ಪರ್ಧೆಗಳಲ್ಲಿ 469 ಚಿನ್ನದ ಪದಕಗಳಿಗಾಗಿ ಸೆಣಸಾಡಲಿದ್ದಾರೆ.