
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ 2025ರಲ್ಲಿ ಅಣ್ಣನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 40 ವರ್ಷದ ವ್ಯಕ್ತಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೋಮವಾರ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಾಧೀಶ ಆನಂದ್ ಪಿ. ಹೊಗಾಡೆ ಅವರು ಅಪರಾಧಿಗೆ ಜೈಲು ಶಿಕ್ಷೆಯ ಜತೆಗೆ ₹25 ಸಾವಿರ ದಂಡ ವಿಧಿಸಿದ್ದು, ಆ ದಂಡದ ಮೊತ್ತವನ್ನು ಸಂತ್ರಸ್ತೆಗೆ ಪಾವತಿಸುವಂತೆ ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಕೀಲರಾದ ಕೆ.ಬಿ. ಜಯಂತಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು.