
ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ಮತ್ತು ಸಾಕ್ಸ್ ವಿತರಿಸಿರುವ ಆರೋಪದ ಮೇಲೆ ಕರ್ನಾಟಕ ಲೋಕಾಯುಕ್ತವು ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಂಡಿದೆ.
ಉಪ ಲೋಕಾಯುಕ್ತ-1 ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ತಮ್ಮ ವ್ಯಾಪ್ತಿಗೆ ಬರುವ 15 ಜಿಲ್ಲೆಗಳ ಡಿಡಿಪಿಐ ಹಾಗೂ ಬಿಇಒಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.
ಸಂಬಂಧಪಟ್ಟ ಜಿಲ್ಲೆಗಳ ಲೋಕಾಯುಕ್ತ ಎಸ್‌ಪಿಗಳು ಎರಡು ವಾರಗಳೊಳಗೆ ಪ್ರಾಥಮಿಕ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.