
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟಿರುವುದು ಹಾಗೂ ಕರಡಿಕಲ್ಲು ಗುಡ್ಡದಲ್ಲಿ ಕಾಡಾನೆ ದಂತ ನಾಪತ್ತೆಯಾಗಿರುವ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.
ಅರಣ್ಯ ಸಂರಕ್ಷಣಾಧಿಕಾರಿಗೆ ನೀಡಿರುವ ಈ ನಿರ್ದೇಶನದಲ್ಲಿ ಕರ್ತವ್ಯಲೋಪ ಪರಿಶೀಲಿಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದ್ದು, ಇದು ಅತ್ಯಂತ ಗಂಭೀರ ಮತ್ತು ಆತಂಕಕಾರಿ ಸಂಗತಿಯಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯದ ಎಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಇಂದಿನಿಂದಲೇ ತಮ್ಮ ವ್ಯಾಪ್ತಿಯ ಅರಣ್ಯ ವಲಯಗಳಿಗೆ ಭೇಟಿ ನೀಡಿ ಗಸ್ತು ಮತ್ತು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸುವಂತೆ ಕಡ್ಡಾಯ ಕ್ಷೇತ್ರ ಪರಿಶೀಲನೆಗೆ ಆದೇಶಿಸಲಾಗಿದೆ.