
ಅಸ್ಸಾಂನ ಹೋಜಾಯ್ ಜಿಲ್ಲೆಯ ಹವಾಯ್ಪುರದ ಬಳಿ ರೈಲ್ವೆ ಹಳಿಯನ್ನು ದಾಟುತ್ತಿದ್ದ ಆನೆಗಳ ಹಿಂಡಿಗಾಗಿ ರಾಜಧಾನಿ ಎಕ್ಸ್ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ತಡೆಯಲಾಯಿತು.
ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಲೋಕೋ-ಪೈಲಟ್ ಅವರ ಸಮಯಪ್ರಜ್ಞೆಯಿಂದಾಗಿ ಆನೆಗಳು ಸುರಕ್ಷಿತವಾಗಿ ಹಳಿಯನ್ನು ದಾಟಲು ಸಾಧ್ಯವಾಯಿತು.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರೈಲ್ವೆ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.