
ಕೆಪಿಎಸ್ಸಿ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ 10ಕ್ಕೂ ಹೆಚ್ಚು ಜನರಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿರುವುದು ತನಿಖೆಯಿಂದ ಬಯಲಾಗಿದೆ.
ಜ್ಞಾನೇಂದ್ರ ಕುಮಾರ್ ಕನ್ನಾಳೆಯಿಂದ ಪ್ರಶ್ನೆಪತ್ರಿಕೆ ಪಡೆದು 1.3 ಕೋಟಿ ರೂಪಾಯಿ ನಗದು ನೀಡಿ, 23 ಲಕ್ಷ ಮೌಲ್ಯದ ಚಿನ್ನಾಭರಣ ಖರೀದಿಸಿದ್ದರು.
ಪ್ರಶ್ನೆಪತ್ರಿಕೆ ಸೋರಿಕೆ ಸಾಕ್ಷ್ಯ ನಾಶಪಡಿಸಲು ಟ್ಯಾಬ್ ಒಡೆದು ಬಿಸಾಕಲಾಗಿದ್ದು, ತನಿಖೆ ತೀವ್ರಗೊಂಡಿದೆ.