
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾದ ಭಾರತೀಯ ತಂಡದಲ್ಲಿ ಕಳೆದ ರಣಜಿ ಸೀಸನ್‌ನಲ್ಲಿ 10 ಪಂದ್ಯಗಳಲ್ಲಿ 60 ವಿಕೆಟ್ ಪಡೆದ ಆಖಿಬ್ ನಬಿ ಅವರಿಗೆ ಸ್ಥಾನ ಸಿಕ್ಕಿಲ್ಲ.
ಕಳೆದ ಎರಡು ಸೀಸನ್‌ಗಳಲ್ಲಿ ಒಟ್ಟು 104 ವಿಕೆಟ್ ಕಬಳಿಸಿ ಜಮ್ಮು-ಕಾಶ್ಮೀರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಬಿ ಅವರನ್ನು ಕೈಬಿಟ್ಟಿರುವುದಕ್ಕೆ ಇರ್ಫಾನ್ ಪಠಾಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇವಲ 26 ವಿಕೆಟ್ ಪಡೆದ ಗುರ್ನೂರ್ ಬ್ರಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರುವ ಆಯ್ಕೆ ಸಮಿತಿಯ ದ್ವಂದ್ವ ನೀತಿಯನ್ನು ಮಾಜಿ ಆಟಗಾರರು ಪ್ರಶ್ನಿಸಿದ್ದಾರೆ.