
ಕರ್ನಾಟಕ ವಿಧಾನಪರಿಷತ್ತಿನ ಪದವೀಧರರ ಕ್ಷೇತ್ರದ ಎರಡು ಹಾಗೂ ಶಿಕ್ಷಕರ ಕ್ಷೇತ್ರದ ಎರಡು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ಒಟ್ಟು ನಾಲ್ಕು ಸ್ಥಾನಗಳಿಗಾಗಿ 43 ಅಭ್ಯರ್ಥಿಗಳು ಕಣದಲ್ಲಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಚುನಾವಣೆ ಏರ್ಪಟ್ಟಿದೆ.
ಶಾಂತಿಯುತ ಹಾಗೂ ನ್ಯಾಯಸಮ್ಮತ ಮತದಾನವನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.